February 26, 2026
Thursday, February 26, 2026
spot_img

ಕರ್ನಾಟಕದಲ್ಲಿ ಇನ್ಮುಂದೆ 4 ದಿನ ಬಿಸಿಲು-ಒಣ ಹವೆ: ಕರಾವಳಿ, ಬೆಂಗಳೂರಿಗರಿಗೆ ಮೋಡದ ಭಾಗ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಸಾಧಾರಣ ಮಳೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ನಾಳೆಯಿಂದ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಸೇರಿ ಹಲವೆಡೆ ಮಳೆಯ ಅಬ್ಬರ ಕಡಿಮೆಯಾಗಲಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಇರಲಿದ್ದು, ಮುಖ್ಯವಾಗಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ.

ಉತ್ತರ ಒಳನಾಡು: ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ.

ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಮತ್ತು ಶಿವಮೊಗ್ಗ. ಈ ಎಲ್ಲಾ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಒಣ ಹವೆ ಇರಲಿದೆ.

ಕರಾವಳಿ ಜಿಲ್ಲೆಗಳು ಅಂದರೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲ ಪ್ರದೇಶಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ.

ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಮೋಡ ಕವಿದು ತಂಪಾದ ವಾತಾವರಣ ಇತ್ತು. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಸಹ ಆದ ಕಾರಣ ‘ಸಿಲಿಕಾನ್ ಸಿಟಿ’ ಸಂಪೂರ್ಣ ಕೂಲ್ ಆಗಿತ್ತು. ನಾಳೆ ಮುಂಜಾನೆ ಕೂಡ ನಗರದ ಹಲವೆಡೆ ಮಂಜು ಕವಿದ ವಾತಾವರಣ ಕಂಡುಬರಲಿದ್ದು, ಬಳಿಕ ಮೋಡ ಕವಿಯುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !