ಕಾಲೇಜ್ ಕ್ಯಾಂಪಸ್‌ನಲ್ಲಿ ಸನ್ನಿ ಲಿಯೋನ್ ನೃತ್ಯ: ವಿದ್ಯಾರ್ಥಿ ಸಂಘದ ಸಿದ್ಧತೆಗೆ ಉಪಕುಲಪತಿ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳ ವಿಶ್ವವಿದ್ಯಾನಿಲಯ ಕ್ಯಾಂಪಸ್‌ನ ಯೂನಿವರ್ಸಿಟಿ ಇಂಜಿನಿಯರಿಂಗ್ ಕಾಲೇಜಿನ ವೇದಿಕೆಯಲ್ಲಿ ವಿದ್ಯಾರ್ಥಿ ಸಂಘವು ಆಯೋಜಿಸಲು ಸಿದ್ಧತೆ ನಡೆಸಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ನೃತ್ಯ ಕಾರ್ಯಕ್ರಮಕ್ಕೆ ಉಪಕುಲಪತಿ ಬ್ರೇಕ್ ಹಾಕಿದ್ದಾರೆ.

ಜುಲೈ5 ರಂದು ಸನ್ನಿ ಲಿಯೋನ್ ನೃತ್ಯ ಪ್ರದರ್ಶನ ನಡೆಸಲು ಸಿದ್ಧತೆಗಳು ನಡೆದಿದ್ದವು. ಆದರೆ ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅನುಮತಿ ಪಡೆದಿರಲಿಲ್ಲ. ಕಾಲೇಜಿನಲ್ಲಿ ಯಾವುದೇ ಸಂದರ್ಭದಲ್ಲೂ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ವಿಸಿ ಹೇಳಿದ್ದಾರೆ.

ಈ ಹಿಂದೆ ವಿದ್ಯಾರ್ಥಿ ಸಂಘಟನೆಗಳು ಆಯೋಜಿಸಿದ್ದ ಕೆಲವು ಕಾರ್ಯಕ್ರಮಗಳಲ್ಲಿ ಅವಘಡ ಸಂಭವಿಸಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಇದಾದ ಬಳಿಕ ಕ್ಯಾಂಪಸ್‌ನ ಹೊರಗೆ ಡಿಜೆ ಪಾರ್ಟಿಗಳು, ಸಂಗೀತ ರಾತ್ರಿ ಇತ್ಯಾದಿಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದೆ. ಈ ಆದೇಶದ ಹೊರತಾಗಿಯೂ, ಕೇರಳ ಎಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿ ಸಂಘವು ವಿಶ್ವವಿದ್ಯಾಲಯದ ಅನುಮತಿಯಿಲ್ಲದೆ ಸನ್ನಿ ಲಿಯೋನ್ ಅವರ ವೇದಿಕೆ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!