WEATHER | ರಾಜ್ಯದಲ್ಲಿ ಹಗಲೆಲ್ಲ ಬಿಸಿಲ ಅಬ್ಬರ, ಸಂಜೆ ಮೇಲೆ ವರ್ಷಧಾರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬಿಸಿಲಬ್ಬರ ಹೆಚ್ಚುತ್ತಿರುವ ಹೊತ್ತಲ್ಲಿ ಹಲವೆಡೆ ಮಳೆರಾಯ ತಂಪೆರೆಯುತ್ತಿದ್ದಾನೆ. ಕೆಲವೆಡೆ ವರುಣ ಅಬ್ಬರಿಸಿ ಬೊಬ್ಬರಿಯುತ್ತಿದ್ದರೇ ಇನ್ನೂ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಮುಂದಿನ ಒಂದು ವಾರ ಗುಡುಗು ಸಹಿತ ಹಾಗೂ ಸಾಧಾರಣ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!