ಐವರು ಆಟಗಾರರಿಗೆ ಮಣೆ ಹಾಕಿದ ಸನ್‌ರೈಸರ್ಸ್ ಹೈದರಾಬಾದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್​ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಯಾರನ್ನು ಉಳಿಸಿಕೊಳ್ಳಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದರು. ಅದರಂತೆ ಇದೀಗ ಬಿಸಿಸಿಐ ನೀಡಿದ ಗಡುವಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಾವ್ಯ ಮಾರನ್ ಒಡೆತನದ ಹೈದರಬಾದ್ ಈ ಬಾರಿ 5 ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಇದರಲ್ಲಿ ಹೆನ್ರಿಚ್ ಕ್ಲಾಸೆನ್, ಪ್ಯಾಟ್ ಕಮಿನ್ಸ್, ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಹೆಸರುಗಳಿವೆ.

ಮೆಗಾ ಹರಾಜಿಗೆ ಭುವನೇಶ್ವರ್ ಕುಮಾರ್, ಏಡನ್ ಮಾರ್ಕ್ರಾಮ್ ಮತ್ತು ವಾಷಿಂಗ್ಟನ್ ಸುಂದರ್ ಅವರಂತಹ ಆಟಗಾರರನ್ನು ಬಿಡುಗಡೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!