ಲೋಕಸಭೆ ಚುನಾವಣೆ ಸಮಯದಲ್ಲಿ ಹೆಚ್ಚಾಗಲಿದೆ ಬಿಸಿಲು: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ಚುನಾವಣೆ (Lok Sabha Elections) ಗೆ ದೇಶವೇ ಸಜ್ಜಾಗುತ್ತಿದ್ದು, ಇದರ ನಡುವೆ ಏಪ್ರಿಲ್ ಮತ್ತು ಜೂನ್ ನಡುವೆ ದೇಶವು ‘ತೀವ್ರ ಬಿಸಿಲು’ ಇರಲಿದೆ ಎಂದು ಎಂದು ಭಾರತ ಹವಾಮಾನ ಇಲಾಖೆ (IMD) ಸೋಮವಾರ ಹೇಳಿದೆ.

ಐಎಂಡಿಯ ಡೈರೆಕ್ಟರ್ ಜನರಲ್ ಮೃತ್ಯುಂಜಯ್ ಮೊಹಾಪಾತ್ರ ಈ ಕುರಿತು ಮಾಹಿತಿ ನೀಡಿದ್ದು, ಏಪ್ರಿಲ್-ಜೂನ್ ಅವಧಿಯಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ನಿರೀಕ್ಷಿಸಲಾಗಿದೆ. ಮಧ್ಯ ಮತ್ತು ಪಶ್ಚಿಮ ಪೆನಿನ್ಸುಲಾರ್ ಭಾರತದಲ್ಲಿ ಹೆಚ್ಚಿನ ಸಂಭವನೀಯತೆ ಇದೆ ಎಂದು ಹೇಳಿದ್ದಾರೆ.

ಈ ಸಮಯದಲ್ಲಿ, ಹೆಚ್ಚಿನ ಬಯಲು ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ಅಲೆಗಳ ಪರಿಸ್ಥಿತಿಗಳನ್ನು ನಿರೀಕ್ಷಿಸಲಾಗಿದೆ. ದೇಶದ ವಿವಿಧ ಭಾಗಗಳು “ಸಾಮಾನ್ಯ ನಾಲ್ಕರಿಂದ ಎಂಟು ದಿನಗಳಿಗೆ ಹೋಲಿಸಿದರೆ 10 ರಿಂದ 20 ಉರಿ ಬಿಸಿಲಿನ ದಿನಗಳನ್ನ” ನಿರೀಕ್ಷಿಸಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್‌ಗಢ ಮತ್ತು ಆಂಧ್ರಪ್ರದೇಶಗಳು ಅತೀ ಹೆಚ್ಚು ತಾಪಮಾನದ ತೀವ್ರ ಪರಿಣಾಮವನ್ನು ಎದುರಿಸುವ ಪ್ರದೇಶಗಳಲ್ಲಿ ಸೇರಿವೆ.

ಬಿಸಿಗಾಳಿ ಪರಿಸ್ಥಿತಿಗಳ ಮುನ್ಸೂಚನೆಗಳ ನಡುವೆ ಮುಂಬರುವ ಚುನಾವಣೆಗೆ ರಾಜ್ಯ ಸರ್ಕಾರಗಳ ಸಿದ್ಧತೆಗಳ ಬಗ್ಗೆ ಕೇಂದ್ರ ಕಿರಣ್ ರಿಜಿಜು ತಿಳಿಸಿದ್ದಾರೆ. ನಮ್ಮ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ದೇಶದ ಬೃಹತ್ ಪ್ರದೇಶದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ ಬಿಸಿಗಾಳಿ ತಡೆಯಲು ಮುಂಜಾಗ್ರತೆ ವಹಿಸಿದ್ದೇವೆ. ನಾವು ಸಿದ್ಧತೆಗಳ ಬಗ್ಗೆ ರಾಜ್ಯ ಸರ್ಕಾರಗಳೊಂದಿಗೆ ಎರಡು ದಿನಗಳ ಸಭೆ ನಡೆಸಿದ್ದೇವೆ ಮತ್ತು ಅದಕ್ಕಾಗಿ ಸಲಹೆಯನ್ನು ನೀಡಿದ್ದೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!