ಹೊಸದಿಗಂತ ಡಿಜಿಟಲ್ ಡೆಸ್ಕ್:
T20 ವಿಶ್ವ ಕಪ್ ನ ಸೂಪರ್ 8 ಕದನದಲ್ಲಿ ಟೀಮ್ ಇಂಡಿಯಾ ಇಂದು ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ.
ಟೀಮ್ ಇಂಡಿಯಾದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಮೊಹಮದ್ ಸಿರಾಜ್ ಬದಲಿಗೆ ಕುಲದೀಪ್ ಯಾದವ್ ಅವರನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಣಕ್ಕೆ ಇಳಿಸಲಾಗಿದೆ. ಇನ್ನು ಅಫ್ಘಾನಿಸ್ತಾನ ತಂಡದಲ್ಲೂ ಪ್ರಮುಖ ಒಂದು ಬದಲಾವಣೆ ಮಾಡಲಾಗಿದ್ದು, ಕರೀಮ್ ಜನತ್ ಬದಲಿಗೆ ಜಜೈ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಭಾರತ : ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿ.ಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಆರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಝದ್ರಾನ್, ನಜಿಬುಲ್ಲಾ ಝದ್ರಾನ್, ಹಜರತುಲ್ಲಾ ಝಜೈ, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಝೈ, ಮೊಹಮ್ಮದ್ ನಬಿ, ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ನವೀನ್-ಉಲ್-ಹಕ್, ಫರೂಲ್ ಹಕ್