March 1, 2026
Sunday, March 1, 2026
spot_img

ಟಿ20 ವಿಶ್ವಕಪ್ | ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ಮ್ಯಾಚ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಸೂರ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತದೆ. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೂ ಒಂದು ರೀತಿಯ ನಾಕೌಟ್ ಪಂದ್ಯವಾದೆ.

ಟಾಸ್ ನಂತರ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇತ್ತ ವೆಸ್ಟ್ ಇಂಡೀಸ್ ತಂಡದಲ್ಲಿ ಬದಲಾವಣೆ ಮಾಡಲಾಗಿದೆ.

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರಿತ್ ಬುಮ್ರಾ, ವರುಣ್ ಚಕ್ರವರ್ತಿ

ವೆಸ್ಟ್ ಇಂಡೀಸ್ ತಂಡ: ಶೈ ಹೋಪ್ (ನಾಯಕ), ಶಿಮ್ರಾನ್ ಹೆಟ್ಮೈರ್, ರೋವ್ಮನ್ ಪೊವೆಲ್, ರೋಸ್ಟನ್ ಚೇಸ್, ಶೆರ್ಫೇನ್ ರುದರ್ಫೋರ್ಡ್, ಜೇಸನ್ ಹೋಲ್ಡರ್, ಮ್ಯಾಥ್ಯೂ ಫೋರ್ಡ್, ರೊಮಾರಿಯೊ ಶೆಫರ್ಡ್, ಗುಡಕೇಶ್ ಮೋತಿ, ಶಮರ್ ಜೋಸೆಫ್, ಅಕಿಲ್ ಹೊಸೈನ್.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !