ಪವನ್‌ ಕಲ್ಯಾಣ್‌, ಚಂದ್ರಬಾಬು ಭೇಟಿಯಾದ ರಜನಿಕಾಂತ್‌: ರಾಜಕೀಯ ವಲಯದಲ್ಲಿ ಭಾರೀ ಚರ್ಚೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜನಪ್ರಿಯ ಚಲನಚಿತ್ರ ನಟ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಅವರು ಟಿಡಿಪಿ ನಾಯಕ ಮತ್ತು ಮಾಜಿ ಸಿಎಂ ಚಂದ್ರಬಾಬು ಹಾಗೂ ಜನಸೇನಾ ನಾಯಕ ಪವನ್‌ ಕಲ್ಯಾಣ್‌ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.  ತಮ್ಮ ಭೇಟಿಯ ಫೋಟೋವನ್ನು ಚಂದ್ರಬಾಬು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ಆತ್ಮೀಯ ಗೆಳೆಯ ತಲೈವಾ ರಜನಿಕಾಂತ್ ಅವರನ್ನು ಭೇಟಿಯಾಗಲು ನನಗೆ ತುಂಬಾ ಸಂತೋಷವಾಗಿದೆ ಎಂದು ಚಂದ್ರಬಾಬು ಹೇಳಿದ್ದಾರೆ.

ಇದೇ ವೇಳೆ ಕೆಲವು ನೆಟ್ಟಿಗರು ಚಂದ್ರಬಾಬು ರಜನಿಕಾಂತ್ ಅವರು ಅನಾದಿ ಕಾಲದಿಂದಲೂ ಒಳ್ಳೆಯ ಸ್ನೇಹಿತರು ಎಂದು ಕಮೆಂಟ್ ಮಾಡಿದ್ದಾರೆ. ನಿನ್ನೆ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದ ರಜನಿಕಾಂತ್ ಇದೀಗ ಚಂದ್ರಬಾಬು ಭೇಟಿಯಾಗಿರುವುದು ಚಿತ್ರರಂಗ ಹಾಗೂ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

ಚಂದ್ರಬಾಬು ಮತ್ತು ರಜನಿ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅವರ ನಡುವೆ ಹಲವು ವಿಚಾರಗಳು ಚರ್ಚೆಯಾಗಿದ್ದು, ರಾಜಕೀಯದ ಬಗ್ಗೆ ಮಾತನಾಡಿದ್ದಾರೆ ಎಂದು ವರದಿಯಾಗಿದೆ. ಪವನ್‌ ಕಲ್ಯಾಣ್-ಚಂದ್ರಬಾಬು ಭೇಟಿ ಬಳಿಕ ಈ ಘಟನೆ ನಡೆದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಪವನ್-ಚಂದ್ರಬಾಬು ಭೇಟಿ ಕುರಿತು ಟಿಡಿಪಿ-ಜನಸೇನಾ ಮೈತ್ರಿ ಏರ್ಪಟ್ಟಿದೆ ಎಂಬ ಅಭಿಪ್ರಾಯಗಳು ಹುಟ್ಟಿಕೊಂಡಿವೆ. ಅದಕ್ಕಾಗಿಯೇ ಈ ಇಬ್ಬರು ನಾಯಕರು ಭೇಟಿಯಾಗಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಬಿಜೆಪಿ ಬೆಂಬಲಿಗರಾಗಿರುವ ರಜನಿಕಾಂತ್ ಅವರೇ ಬಂದು ಚಂದ್ರಬಾಬು ಅವರನ್ನು ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಆದರೆ, ಇದು ಸಾಮಾನ್ಯ ಸಭೆ ಎಂದು ಟಿಡಿಪಿ ಮೂಲಗಳು ಹೇಳುತ್ತಿವೆ. ಚಿತ್ರವೊಂದರ ಶೂಟಿಂಗ್ ಗಾಗಿ ಹೈದರಾಬಾದ್ ಗೆ ಬಂದಿದ್ದ ರಜನಿಕಾಂತ್ ಸೌಜನ್ಯಯುತವಾಗಿ ಚಂದ್ರಬಾಬು ಅವರನ್ನು ಭೇಟಿ ಮಾಡಿದ್ದು, ಇದರಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!