LATEST UPDATE | ಸೂಪರ್ ಸಕ್ಸಸ್: ಇಂದು ಮತ್ತೆ ಪಾಕ್ ಗೆ ಮಣ್ಣು ಮುಕ್ಕಿಸಿದ ಭಾರತೀಯ ಸೇನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು, ಎಸ್ -400 ಹಲವಾರು ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ..ಪಾಕಿಸ್ತಾನದಿಂದ ಕಳುಹಿಸಲಾದ ಡ್ರೋನ್‌ಗಳನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹೊಡೆದುರುಳಿಸಿದೆ.

ಜಮ್ಮು, ರಾಜಸ್ಥಾನದ ವಾಯು ನೆಲೆಯ ಮೇಲೆ ಪಾಕಿಸ್ತಾನ ನಡೆಸಿದ ದಾಳಿಯನ್ನು ತಡೆಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಭಾರತದ ವಾಯು ನೆಲೆಯ ಮೇಲೆ ಪಾಕಿಸ್ತಾನ ದಾಳಿಯನ್ನು ನಡೆಸುತ್ತಿದ್ದಂತೇ, ಜಮ್ಮು, ರಾಜಸ್ಥಾನದ ಜೈಸಲ್ಮೇರ್ ನಲ್ಲಿ ಬ್ಲಾಕ್ ಔಟ್ ಮಾಡಲಾಯಿತು.

ಈ ಮೂಲಕ ಪಾಕಿಸ್ತಾನದಿಂದ ಭಾರತದ ಮೇಲೆ ವಾಯು ನೆಲೆಯನ್ನು ಗುರಿಯಾಗಿಸಿಕೊಂಡು ನಡೆಸಿದಂತ ಆಕ್ರಮಣವನ್ನು ಅಷ್ಟೇ ತ್ವರಿತವಾಗಿ ಭಾರತೀಯ ಸೇನೆ ವಿಫಲಗೊಳಿಸಿದ್ದು, ಎಲ್ಲಾ ವಾಯುನೆಲೆಗಳು ಸುರಕ್ಷಿತವಾಗಿರುವುದಾಗಿ ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!