Sunday, March 26, 2023

Latest Posts

ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಬಜೆಟ್: ಸಚಿವ ಶಿವರಾಮ ಹೆಬ್ಬಾರ್

ಹೊಸದಿಗಂತ ವರದಿ,ಯಲ್ಲಾಪುರ :

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿರುವ 2022 – 23 ನೇ ಸಾಲಿನ ಆಯವ್ಯಯವು ಜನ ಸಾಮಾನ್ಯರ ಬಜೆಟ್ ಆಗಿದೆ. ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಬಜೆಟ್ ಪೂರಕವಾಗಿದೆ.ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.ಕೃಷಿಕರ, ಶ್ರಮಿಕರ, ಮಧ್ಯಮ ವರ್ಗಗಳ ಹಾಗೂ ಬಡವರ, ಮಹಿಳೆಯ ಪರವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಸಮುದಾಯಗಳು ಸೇರಿದಂತೆ ಎಲ್ಲಾ ಸಮುದಾಯಗಳಿಗೆ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ.

ರಾಜ್ಯದ ಅಭಿವೃದ್ಧಿಗೆ ಶ್ರಮಿಸುವ ಶ್ರಮಿಕ ವರ್ಗಕ್ಕೆ ಹಲವಾರು ವಿನೂತನ ಯೋಜನೆಯನ್ನು ಘೋಷಿಸಲಾಗಿದೆ. ಕೇಂದ್ರ ಸರಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ 100 ಕ್ಕೆ ಹೆಚ್ಚಳ ಮಾಡಲಾಗುವುದು ಹಾಗೂ 19 ಹೊಸ ಚಿಕಿತ್ಸಾಲಯಗಳ ಪ್ರಾರಂಭಿಸಲಾಗುವುದು. ಹಳದಿ ಬೋರ್ಡ್ ವಾಹನವನ್ನು ಹೊಂದಿರುವ ಚಾಲಕರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ವಿದ್ಯಾನಿಧಿ ಯೋಜನೆ, ಆರೋಗ್ಯ ಸೌಲಭ್ಯಕ್ಕೆ ವಿಶೇಷ ಯೋಜನೆ ನೀಡಲಾಗುವುದು. ಕಟ್ಟಡ ಕಾರ್ಮಿಕರಿಗೆ ರೂ. 2610 ಕೋಟಿ ಯೋಜನಲೆ ಅನುಷ್ಠದೆ ಾನ, ಕಾರ್ಮಿಕರ ಸಾಂದ್ರತೆ ಹೆಚ್ಚಿರುವ ಸ್ಥಳೀಯ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಹಾಗೂ ಶ್ರಮಿಕ ಸಂಜೀವಿನಿ ಸಂಚಾರಿ ಚಿಕಿತ್ಸಾ ಘಟಕವನ್ನು ಪ್ರಾರಂಭಿಸಲಾಗುವುದು ಮತ್ತು ರಾಜ್ಯದಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು.

ಉತ್ತರಕನ್ನಡ ಜಿಲ್ಲೆ ಅಭಿವೃದ್ಧಿಗೆ ಈ ಬಾರಿಯ ಬಜೆಟ್ನಲ್ಲಿ ಹೆಚ್ಚಿನ ಯೋಜನೆಗಳನ್ನು ನೀಡಲಾಗಿದೆ. ಜಿಲ್ಲೆಯ ಬಂದರಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮಾಜಾಳಿಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ರೂ. 250 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿರ್ಮಾಣ, ಖೇಣಿ ಮತ್ತು ಬೇಲೆಕೇರಿಯಲ್ಲಿ ಗ್ರೀನ್ ಫೀಲ್ಡ್ ಬಂದರು ಅಭಿವೃದ್ಧಿಪಡಿಸಲು ಪ್ರಸ್ತಾಪ, ತದಡಿ ಬಂದರನ್ನು ಪರಿಸರ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಕ್ರಮ. ಪ್ರವಾಸೋದ್ಯಮಕ್ಕೆ ಪೂರಕವಾಗಿ ತದಡಿ ಮತ್ತು ಅಗನಾಶಿನಿ ಮಧ್ಯೆ ಕಡವು ದೋಣಿ ಆರಂಭಕ್ಕೆ ಪ್ರಸ್ತಾಪ ಹಾಗೂ ಸಾಗರಮಾಲಾಯೋಜನೆಯಡಿ 1880 ಕೋಟಿ ರೂಪಾಯಿ ವೆಚ್ಚದಲ್ಲಿ 24 ಯೋಜನೆ ಅನುಷ್ಠಾನ ಹಾಗೂ ಕಾರವಾರ ಬಂದರು ವಿಸ್ತರಣೆ,ಕಾರವಾರದಲ್ಲಿ ರಾಜ್ಯದ ಮೊದಲ ಜಲಸಾರಿಗೆ ಮತ್ತು ಮೀನುಗಾರಿಕೆ ತರಬೇತಿ ಸಂಸ್ಥೆ ಸ್ಥಾಪನೆ ಇವುಗಳಿಂದ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭಿಸಲಿದೆ. ಒಟ್ಟಾರೆ ಜನಸಾಮಾನ್ಯರ ಬಜೆಟ್ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ.

ಕಿತ್ತೂರು ಕರ್ನಾಟಕದ ಮಧ್ಯ ಭಾಗವಾಗಿರುವ ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಉಪ ಕೇಂದ್ರವನ್ನು ಸ್ಥಾಪಿಸುವುದಕ್ಕೆ 250 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಟ್ಟರುವುದು ಅತ್ಯಂತ ಸಂತಸ ತಂದಿದೆ. ಇದರಿಂದ ಈ ಭಾಗದ ಬಡವರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ಲಭಿಸಲಿದೆ.

ಕಳೆದ 6 ತಿಂಗಳಿಂದ ಉತ್ತಮ ಆಡಳಿತವನ್ನು ನೀಡಿ ನಾಡಿನ ರೈತನ ಶ್ರಮಿಕರ, ಬಡವರ, ಯುವಕರ ಆಶೋತ್ತರಗಳಿಗೆ ಸ್ಪಂದಿಸಿದ ಜನ ಸಾಮಾನ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!