ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದಿಂದ ಉಚಿತವಾಗಿ ಮತ್ತು ನೇರ ರಾಜ್ಯ ಖರೀದಿ ಅಡಿಯಲ್ಲಿ 66.07 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
4.49 ಕೋಟಿಗಿಂತ (4,49,68,620) ಹೆಚ್ಚು ಉಳಿಕೆ ಮತ್ತು ಬಳಕೆಯಾಗದ ಲಸಿಕೆ ಡೋಸ್ಗಳು ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಹೇಳಿದೆ.
66.07 ಕೋಟಿಗಿಂತಲೂ (66,07,19,455) ಹೆಚ್ಚು ಲಸಿಕೆ ಡೋಸ್ಗಳನ್ನು ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ಮತ್ತು ನೇರ ರಾಜ್ಯ ಖರೀದಿ ವಿಧಾನದ ಮೂಲಕ ಒದಗಿಸಲಾಗಿದೆ. ಸದ್ಯ 85 ಲಕ್ಷಕ್ಕಿಂತ ಹೆಚ್ಚು ಡೋಸ್ಗಳು (85,63,780) ಪೂರೈಕೆಯ ಹಂತದಲ್ಲಿವೆ ಎಂದು ಹೇಳಿದೆ.
ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು,ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಲಭ್ಯತೆಯಿರುವಂತೆ ಮಾಡುವ ಮೂಲಕ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲಾಗಿದೆ.