ಬಿಜೆಪಿ ಅಭ್ಯರ್ಥಿ ಸೋಮಲಿಂಗಪ್ಪ ಅವರನ್ನು ಬೆಂಬಲಿಸಿ: ಡಾ.ಕೆ.ಲಕ್ಷ್ಮಣ್ ಮನವಿ

ಹೊಸ ದಿಗಂತ ವರದಿ, ಸಿರಗುಪ್ಪ:

ರಾಜಕೀಯ ಜೀವನದಲ್ಲಿ ಸಣ್ಣ ಕಪ್ಪುಚುಕ್ಕೆ ಇಲ್ಲದೇ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ಜನಸೇವೆ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಅಭ್ಯರ್ಥಿ ಎಂ.ಎಸ್.ಸೋಮಲಿಂಗಪ್ಪ ಅಚರನ್ನು ಬೆಂಬಲಿಸಿ ಆರ್ಶಿವಾದಿಸಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಅದ್ಯಕ್ಷ ಡಾ.ಕೆ.ಲಕ್ಷ್ಮಣ್ ಜಿ ಅವರು ಮನವಿ ಮಾಡಿದರು.

ನಗರದ ಬಿಜೆಪಿ ತಾಲೂಕು ಕಚೇರಿಯಲ್ಲಿ ‌ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಸದಾ ಹಸನ್ಮುಖಿಯಾಗಿರುವ ನಮ್ಮ ಅಭ್ಯರ್ಥಿ ಎಂ.ಎಸ್.ಸೋಮಲಿಂಗಪ್ಪ ಅವರಿಗೆ ಬಡವರ ಬಗ್ಗೆ ಅಪಾರ ಕಾಳಜಿ, ಜೊತೆಗೆ ಹಗಲಿರುಳು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಸ್ವಭಾವ ಅವರದ್ದು, ಅವದಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕೋಟ್ಯಾಂತರ ಅನುದಾನ ತಂದು ನಾನಾ ರೀತಿಯಲ್ಲಿ ಅಭಿವೃದ್ಧಿ ಪಡಿಸಿ ಜಿಲ್ಲೆ ಅಷ್ಟೇ ಅಲ್ಲೇ ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ, ಕ್ಷೇತ್ರದ ಪ್ರತಿಯೋಬ್ಬ ಮತದಾರ ಪ್ರಭುಗಳು ಕ್ಷೇತ್ರದ ಅಭಿವೃದ್ಧಿ ನಿರೀಕ್ಷಿಸಿ ಬಿಜೆಪಿ ಬೆಂಬಲಿಸಿ ಆರ್ಶಿವಾದಿಸಬೇಕು ಎಂದು ಮನವಿ ಮಾಡಿದರು.

ಸುಳ್ಳು ಹೇಳುವುದೇ ಕಾಂಗ್ರೆಸ್ ನವರ ಸಂಸ್ಕೃತಿ, ಅವರಿಗೆ ಅಭಿವೃದ್ಧಿ ಬೇಕಿಲ್ಲ, ಅವರಿಗೆ ಅಧಿಕಾರ ಮುಖ್ಯ, ಜನರ ಅಭಿವೃದ್ಧಿ ಬೇಕಿಲ್ಲ, ಅಧಿಕಾರಕ್ಕಾಗಿ ಕಾಂಗ್ರೆಸ್ ನವರು ಏನಾದರೂ ಮಾಡಲು ಸಿದ್ದ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ, ಅಭಿವೃದ್ಧಿ ಜೊತೆಗೆ ಬಡವರ ಬಗ್ಗೆ ಕಳಕಳಿ, ಕಾಳಜಿ ಇರುವ ಪಕ್ಷ ನಮ್ಮದು, ಪ್ರತಿಯೋಬ್ಬರೂ ಬಿಜೆಪಿ ಬೆಂಬಲಿಸಿ ಆರ್ಶಿವಾದಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಬಿಜೆಪಿ ಅಭ್ಯರ್ಥಿ, ಶಾಸಕ ಎಂ.ಎಸ್.ಸೋಮಲಿಂಗಪ್ಪ  ಮಾತನಾಡಿ, ಕಾಂಗ್ರೆಸ್ ನವರ ಬಣ್ಣದ ಮಾತುಗಳಿಗೆ ಮರುಳಾಗದೇ ಅಭಿವೃದ್ಧಿ ನಿರೀಕ್ಷಿಸಿ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಮಂಡಲ ಅಧ್ಯಕ್ಷ ಆರ್.ಸಿ.ಪಂಪನಗೌಡ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!