ಮತಾಂಧ ಶಕ್ತಿಗಳಿಗೆ ಬೆಂಬಲ ಸಿಗ್ತಿರೋದೇ ಲವ್‌ ಜಿಹಾದ್‌ಗೆ ಕಾರಣ: ವಿಜಯೇಂದ್ರ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹುಬ್ಬಳ್ಳಿ:

ರಾಜ್ಯದಲ್ಲಿ ಲವ್ ಜಿಹಾದ್, ಆತ್ಮಹತ್ಯೆ ಹಾಗೂ ಹತ್ಯೆ ಪ್ರಕರಣ ಹೆಚ್ಚಾಗುತ್ತಿದ್ದು, ಇದಕ್ಕೆ ಮತಾಂಧ ಶಕ್ತಿಗಳಿಗೆ ಬೆಂಬಲ ನೀಡುತ್ತಿರುವುದೆ ಮೂಲ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಲವ್ ಜಿಹಾದ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಹುಬ್ಬಳ್ಳಿಯಲ್ಲಿ ನಿನ್ನೆ ನಡೆದ ದಲಿತ ಅಪ್ರಾಪ್ತ ಬಾಲಕಿಯನ್ನು ಸದ್ದಾಂ ಹುಸೇನ ಎಂಬಾತ ಅತ್ಯಾಚಾರ ಪ್ರಕರಣವೇ ಸಾಕ್ಷಿಯಾಗಿದೆ. ಇದು ಸಹ ಲವ್ ಜಿಹಾದ ಪ್ರಕರಣ ಭಾಗವಾಗಿದೆ ಎಂದು ಹರಿಹಾಯ್ದರು.

ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ, ನೇಹಾ ಹತ್ಯೆ ಆರೋಪಿಗಳ ತಕ್ಷಣ ಒದ್ದು ಒಳಗೆ ಹಾಕಿದ್ದರೆ ಈಗ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಆದರೆ ಮುಖ್ಯ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಮತಬ್ಯಾಂಕ್ ಗಾಗಿ, ತೃಷ್ಟೀಕರಣ ಮಾಡಿದ್ದರಿಂದ ಇಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಸಂಪೂರ್ಣವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೇರಳಾ ಮಾದಿರಯಲ್ಲಿ ರಾಜ್ಯವಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಂಡಿದ್ದು, ಸದ್ಯ ಚುನಾವಣಾ ಪ್ರಚಾರದಲ್ಲಿ ಪೆನ್ ಡ್ರೈವ್ ವಿಚಾರ ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ನಾವು ಖಂಡಿಸಿದ್ದೇವೆ ಎಂದರು.

ಅಮಿತ್ ಶಾ ಅವರು ಸಹ ಇಂತಹ ಪ್ರಕರಣ ಬೆಂಬಲಿಸಿಲ್ಲ. ಖಂಡಿಸುತ್ತೇವೆ ಎಂದಿದ್ದಾರೆ. ಈ ಪ್ರಕರಣ ಬಗ್ಗೆ ನಮಗೆ ಮುಂಚಿತವಾಗಿ ಗೊತ್ತಿರಲಿಲ್ಲ. ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!