ರೈತ ಪರ ಯೋಜನೆಗಳ ಅನುಷ್ಠಾನಕ್ಕಾಗಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಿ: ರವೀಂದ್ರ ಶ್ರೀಕಂಠಯ್ಯ

ಹೊಸದಿಗಂತ ಶ್ರೀರಂಗಪಟ್ಟಣ:

ಕೃಷಿ ಪ್ರಧಾನವಾಗಿರುವ ಮಂಡ್ಯ ಜಿಲ್ಲೆಯಲ್ಲಿ ರೈತ ಪರಯೋಜನೆಗಳ ಅನುಷ್ಠಾನಕ್ಕಾಗಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಕುಮಾರಸ್ವಾಮಿ ಅವರ ನಾಯಕತ್ವವನ್ನು ಬಲಗೊಳಿಸಬೇಕು ಎಂದು ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮನವಿ ಮಾಡಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅರಕೆರೆ, ಚಿಂದೇಗೌಡನ ಕೊಪ್ಪಲು, ಮಂಡ್ಯ ಕೊಪ್ಪಲು, ಗೆಂಡೆ ಹೊಸಹಳ್ಳಿ, ಮಣಿಗೌಡಗೌಡನ ಹುಂಡಿ, ಮಾಡ್ರಹಳ್ಳಿ, ಬಳ್ಳೇಕೆರೆ, ನೇರಳೆಕೆರೆ, ಬೆಟ್ಟಹಳ್ಳಿ, ಆಲದಹಳ್ಳಿ, ಪೀಹಳ್ಳಿ, ಕೊಡಿಯಾಲ, ಹುಣಸನಹಳ್ಳಿ ಸೇರಿದಂತೆ ಮುಂತಾದ ಗ್ರಾಮಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೆಟಿ ಮಾಡಿ ಹೆಚ್ಡಿಕೆ ಪರ ಮತಯಾಚಿಸಿದರು.

ರಾಜ್ಯದ ನೀರಾವರಿ ಹಾಗೂ ಕಷಿ ಕ್ಷೇತ್ರದ ಸಮಸ್ಯೆಗಳ ನಿವಾರಣೆಗಾಗಿ ಹಲವು ದಶಕಗಳ ಕಾಲ ಹೋರಾಟ ನಡೆಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಶಕ್ತಿ ತುಂಬಲು ಎನ್‌ಡಿಎ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಒತ್ತಾಯಿಸಿದರು.

ಸ್ವ-ಗ್ರಾಮ ಅರಕೆರೆ ಗ್ರಾಮದ ಪ್ರಮುಖ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಬಳಿಕ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮನೆ-ಮನೆಗೆ ತೆರಳಿ ಮತಯಾಚಿಸಿದರು. ನೀರಿಲ್ಲದೆ ಬರದಿಂದ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿ ನಲುಗಿದ್ದಾರೆ. ಬರಗಾಲದ ಬೇಗುದಿಯಿಂದ ಬಳಲುತ್ತಿರುವ ರೈತ ಹಾಗೂ ಜಾನುವಾರುಗಳ ಸಂಕಷ್ಟಕ್ಕೆ ನೆರವಾಗಬೇಕಾದ ರಾಜ್ಯ ಸರ್ಕಾರ, ಕನ್ನಂಬಾಡಿ ನದಿ ಪಾತ್ರದ ನಾಲೆಗಳಿಗೆ ನೀರು ಹರಿಸದೇ ತಮಿಳುನಾಡಿಗೆ ನೀರು ಹರಿಸಲು ಆಸಕ್ತಿ ತೋರುತ್ತಿರುವುದು ವಿಪರ್ಯಾಸದ ಸಂಗತಿ ಎಂದರು.

ಈ ಭಾಗದಲ್ಲಿರುವ ಗ್ರಾಮಗಳ ಮನೆಗಳಿಗೆ ತೆರಳಿದಾಗ ಆ ಗ್ರಾಮಗಳ ರೈತರು ಒಣಗುತ್ತಿರುವ ತಮ್ಮ ಬೆಳೆಗಳ ಬಗ್ಗೆ ಮಾತನಾಡುವುದನ್ನು ನೋಡಿ ತೀವ್ರ ಬೇಸರ ಉಂಟಾಗುತ್ತಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ರಾಜ್ಯ ಸರ್ಕಾರ ಮತ ಯಾಚನೆ ಮಾಡುತ್ತಿರುವುದು ನನಗೆ ಸಂಕೋಚವನ್ನುಟ್ಟು ಮಾಡುತ್ತಿದೆ ಎಂದು ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!