ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗುರುವಾರ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾದರು.
ರಾಯಚೂರು ಜಿಲ್ಲೆಯ ಸಿಂಧನೂರಿನವರಾದ ಕಾಂಗ್ರೆಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಕರಿಯಪ್ಪ, ಚಾಮರಾಜನಗರದವರಾದ ಬಿಎಸ್‍ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಕೋಲಾರ ಶ್ರೀನಿವಾಸಪುರ ನಿವಾಸಿ, ಕಾಂಗ್ರೆಸ್ ಮುಖಂಡ ಮತ್ತು ಸಮಾಜಸೇವಕ ಶ್ರೀನಿವಾಸ್ ರೆಡ್ಡಿ ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದರು.
ರಾಜ್ಯ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾಣ, ರಾಜ್ಯ ಸಚಿವರಾದ ಭೈರತಿ ಬಸವರಾಜ್, ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಈ ಮುಖಂಡರು ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.