ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಚುನಾವಣೆಗೂ ಮುನ್ನ ಕ್ಷೇತ್ರದಲ್ಲಿ ಚುನಾವಣಾ ಚಟುವಟಿಕೆಗಳು ಗರಿದೆರಿದೆ. ಈ ವೇಳೆ ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೊಸ ಹೇಳಿಕೆಯೊಂದನ್ನು ನೀಡಿದ್ದಾರೆ.
ನಾನು ಪ್ರತಿ ಕ್ಷೇತ್ರದಲ್ಲಿ 20,000 ರಿಂದ 25,000 ಮತಗಳ ಮೇಲೆ ಪ್ರಭಾವ ಬೀರಬಲ್ಲೆ ಎಂದು ಅವರು ಹೇಳಿದ್ದಾರೆ.
ನನ್ನ ಮನಸ್ಸಿನಲ್ಲಿ ಒಂದು ಸಂಖ್ಯೆ ಇದೆ ಮತ್ತು ನನಗೆ ಗುಣಮಟ್ಟದ ಸ್ಥಾನಗಳು ಬೇಕು. ಆದರೆ ಸಾರ್ವಜನಿಕ ವೇದಿಕೆಯಲ್ಲಿ ಆ ಮಾಹಿತಿಯನ್ನು ಬಹಿರಂಗಪಡಿಸಲು ನಾನು ಬಯಸುವುದಿಲ್ಲ. ಅದು ಸಮ್ಮಿಶ್ರ ಪಾಲುದಾರ ಪಕ್ಷಕ್ಕೆ ಅನ್ಯಾಯ ಮಾಡಿದ ರೀತಿ ಆಗುತ್ತದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಸೀಟು ಹಂಚಿಕೆ ಮಾತುಕತೆಗಳನ್ನು ಔಪಚಾರಿಕವಾಗಿ ಪ್ರಾರಂಭಿಸಿಲ್ಲ ಎಂದು ಅವರು ಹೇಳಿದರು.
ನನ್ನ ಬೆಂಬಲಿಗರು ನನ್ನನ್ನು ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಾರೆ. ನಾನು ಬಿಹಾರದಲ್ಲಿ ಎನ್‌ಡಿಎ ಸರ್ಕಾರದ ಭಾಗವಾಗಿಲ್ಲ. ನಾನು ಸರ್ಕಾರವನ್ನು ಬೆಂಬಲಿಸುತ್ತಿದ್ದೇನೆ. ನಾನು ಕೇಂದ್ರದಲ್ಲಿ ಮಾತ್ರ ಎನ್‌ಡಿಎಯ ಭಾಗವಾಗಿದ್ದೇನೆ ಎಂದು ಅವರು ಅವರು ಹೇಳಿದ್ದಾರೆ.
ನಿತೀಶ್ ಕುಮಾರ್ ಸರ್ಕಾರವನ್ನು ಟೀಕಿಸಿದ ಪಾಸ್ವಾನ್, ಕಾನೂನು ಮತ್ತು ಸುವ್ಯವಸ್ಥೆ ವಿಷಯದಲ್ಲಿ ನಾನು ನಿತೀಶ್ ಕುಮಾರ್ ಅವರ ಸರ್ಕಾರವನ್ನು ಟೀಕಿಸುತ್ತೇನೆ, ರಾಜ್ಯದಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬಬೇಕು ಎಂದು ಹೇಳಿದರು.