BIG NEWS | ಐದು ಮತ್ತು ಎಂಟನೇ ತರಗತಿ ಬೋರ್ಡ್ ಎಕ್ಸಾಂಗೆ ಸುಪ್ರೀಂ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಪಠ್ಯಕ್ರಮವಿರುವ ಶಾಲೆಗಳಲ್ಲಿ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಬೋರ್ಡ್ ಎಕ್ಸಾಂ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಬೋರ್ಡ್ ಎಕ್ಸಾಂ ನಡೆಸಲು ಹೈ ಕೋರ್ಟ್ ಅನುಮತಿ ನೀಡಿದ್ದು, ಈ ಆದೇಶವನ್ನು ಪ್ರಶ್ನಿಸಿ ನೋಂದಾಯಿತ ಅನುದಾನ ರಹಿತ ಶಾಲೆಗಳ ಖಾಸಗಿ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಇಂದು ವಿಚಾರಣೆ ನಡೆಸಿದ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯನ್ನು ತಿರಸ್ಕರಿಸಿದೆ. ಬಹಳ ಕಡಿಮೆ ಸಮಯದಲ್ಲಿ ಪರೀಕ್ಷೆ ಮಾಡಲು ಹೊರಟಿದೆ, ಈ ಬಗ್ಗೆ ಶಾಲೆಗಳ ಜತೆ, ಪೋಷಕರ ಜತೆ ಚರ್ಚೆಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಬಹುದು ಎಂದು ವಾದ ಮಾಡಿದ್ದು, ಸುಪ್ರೀಂ ಇದನ್ನು ಒಪ್ಪಿಲ್ಲ.

ಈ ವರ್ಷದಿಂದ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಆದರೆ ಪೋಷಕರು ಇದನ್ನು ಒಪ್ಪದೇ ಕೋರ್ಟ್ ಮೊರೆ ಹೋಗಿದ್ದರು. ಇಂದಿನಿಂದ ಪರೀಕ್ಷೆಗಳು ಆರಂಭವಾಗಿದ್ದು, ಏಪ್ರಿಲ್೧ವರೆಗೆ ನಡೆಯಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!