ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಯಾವುದೇ ಆದೇಶ ಹೊರಡಿಸದೆ ಸೆ.6ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ವಾದ ವಿವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್ ಇಂದು ಯಾವುದೇ ತೀರ್ಪು ನೀಡಿಲ್ಲ. ಈ ವೇಳೆ ತಮಿಳುನಾಡು ಸರ್ಕಾರದ ವಕೀಲರು ಸೆ.11ಕ್ಕೆ ವಿಚಾರಣೆ ಮುಂದೂಡುವಂತೆ ಒತ್ತಾಯಿಸಿದರು. ಆದರೆ ಸುಪ್ರೀಂಕೋರ್ಟ್ ಸೆ.6ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿತು.
ಆಗಸ್ಟ್ 28ರಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಸಭೆಯಲ್ಲಿ ತಮಿಳುನಾಡು 24,000 ಕ್ಯೂಸೆಕ್ ನೀರು ಬಿಡುಗಡೆಗೆ ಒತ್ತಡ ಹೇರಿತ್ತು. ಆದರೆ ಸಭೆಯಲ್ಲಿ ನಿತ್ಯವೂ 5 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಕರ್ನಾಟಕ್ಕೆ ಸೂಚನೆ ನೀಡಲಾಗಿತ್ತು.
ಈ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವಾರ ವಿಚಾರಣೆ ನಡೆಸಿದ್ದ ಕೋರ್ಟ್, ಕೂಡಲೇ ಆದೇಶ ಹೊರಡಿಸುವುದು ಕಷ್ಟ ಎಂದು ಸೆ.1 ಕ್ಕೆ ವಿಚಾರಣೆ ಮುಂದೂಡಿತ್ತು.