ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬಂಧಿತರಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಸಿಸೋಡಿಯಾ ಅವರು ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ತಮ್ಮ ಪತ್ನಿಯ ಆರೋಗ್ಯ ಸರಿಯಿಲ್ಲ ಹಾಗಾಗಿ ನನ್ನನ್ನು ಬಿಡುಗಡೆ ಮಾಡಿ ಎಂದು ಉಲ್ಲೇಖಿಸಿದ್ದರು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಸಿಸೋಡಿಯಾ ಅವರ ಪತ್ನಿಯ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದರು. ಬಳಿಕ ಸಿಸೋಡಿಯಾ ಅವರ ಪತ್ನಿಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಸಿಸೋಡಿಯಾ ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 4ರಂದು ನಡೆಸುವುದಾಗಿ ಹೇಳಿದ್ದಾರೆ.
ಮದ್ಯ ನೀತಿಯಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಬಿಐ ಫೆಬ್ರವರಿ 2 ರಂದು ದೆಹಲಿಯ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವರಾಗಿದ್ದ ಸಿಸೋಡಿಯಾ ಅವರನ್ನು ಅರೆಸ್ಟ್ ಮಾಡಲಾಗಿತ್ತು, ಅಂದಿನಿಂದ ಅವರು ಬಂಧನದಲ್ಲಿದ್ದಾರೆ.