Tuesday, September 23, 2025

ಆರ್.ಅಶೋಕ್ ವಿರುದ್ಧ ಬಗರ್ ಹುಕುಂ ಭೂಮಿ ಹಂಚಿಕೆ ಭ್ರಷ್ಟಾಚಾರ ಆರೋಪ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಗರ್ ಹುಕುಂ ಭೂಮಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಒಂದು ವಾರಗಳ ಕಾಲ ಮುಂದೂಡಿದೆ.

ತಮ್ಮ ವಿರುದ್ಧ ತನಿಖೆಗೆ ತಡೆ ಕೋರಿ ಆರ್ ಅಶೋಕ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 1 ವಾರಗಳ ಕಾಲ ಅರ್ಜಿ ವಿಚಾರಣೆ ಮುಂದೂಡಿದೆ.

ಪ್ರಕರಣದ ತನಿಖೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು . ಹಾಗಾಗಿ ವಿಪಕ್ಷ ನಾಯಕ ಆರ್ ಅಶೋಕ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ