ಬಿಬಿಸಿ ಸಾಕ್ಷ್ಯಚಿತ್ರ : ಕೇಂದ್ರದ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಅಸ್ತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದಿನ ಸೋಮವಾರ (ಫೆಬ್ರವರಿ 6) ವಿಚಾರಣೆ ನಡೆಸಲಿದೆ.

ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪೀಠದ ಮುಂದೆ ಆರಂಭಿಕ ವಿಚಾರಣೆಗೆ ವಿಷಯವನ್ನು ವಕೀಲ M.L.ಶರ್ಮಾ ಪ್ರಸ್ತಾಪಿಸಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಲು ಸುಪ್ರೀಂ ಒಪ್ಪಿಗೆ ನೀಡಿದೆ. ಈ ಕುರಿತು ಸುಪ್ರೀಂ ಫೆಬ್ರವರಿ 6ಕ್ಕೆ ವಿಚಾರಣೆ ನಡೆಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!