ಮುಂಬೈ ಕಾಲೇಜಿನಲ್ಲಿ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್;

ಮುಂಬೈನ ಕಾಲೇಜಿನ ಆವರಣದಲ್ಲಿ ಹಿಜಾಬ್, ಬುರ್ಖಾ, ಕ್ಯಾಪ್ ರೀತಿಯ ಉಡುಗೆಗಳನ್ನು ಧರಿಸುವುದನ್ನು ನಿಷೇಧಿಸಿ ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.

ಆದ್ರೆ ತರಗತಿಯೊಳಗೆ ಹುಡುಗಿಯರು ಯಾವುದೇ ರೀತಿಯ ಬುರ್ಖಾವನ್ನು ಧರಿಸಲು ಅನುಮತಿ ನೀಡಲಾಗುವುದಿಲ್ಲ ಮತ್ತು ಕ್ಯಾಂಪಸ್‌ನಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಮತಿಯಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ಮಹಿಳಾ ಸಬಲೀಕರಣ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಹಿಜಾಬ್‌ಗಳು, ಬುರ್ಖಾಗಳು, ಸ್ಟೋಲ್‌ಗಳು ಮತ್ತು ಕ್ಯಾಪ್‌ಗಳನ್ನು ಧರಿಸುವುದನ್ನು ನಿಷೇಧಿಸುವ ಮುಂಬೈ ಕಾಲೇಜಿನ ನಿಷೇಧಕ್ಕೆ ಇಂದು ಮಧ್ಯಂತರ ತಡೆಯಾಜ್ಞೆ ನೀಡಿದೆ.

ವಿಚಾರಣೆ ವೇಳೆ ನ್ಯಾಯಾಲಯ ಮಹಿಳಾ ಸಬಲೀಕರಣಕ್ಕೆ ಇಂತಹ ನಿಷೇಧವು ಹೇಗೆ ಕೊಡುಗೆ ನೀಡುತ್ತದೆ ಎಂದು ಕಾಲೇಜಿನ ವಿಧಾನವನ್ನು ಪ್ರಶ್ನಿಸಿದೆ. ಹಾಗೇ, ತಿಲಕ, ಬಿಂದಿಗೆ ಏಕೆ ವಿನಾಯಿತಿ ನೀಡಲಾಗಿದೆ? ಎಂದು ಪ್ರಶ್ನೆ ಮಾಡಿದೆ.

‘ಹೆಣ್ಣುಮಕ್ಕಳು ಧರಿಸುವುದನ್ನು ನಿರ್ಬಂಧಿಸುವ ಮೂಲಕ ನೀವು ಹೇಗೆ ಸಬಲೀಕರಣ ಮಾಡುತ್ತಿದ್ದೀರಿ? ದುರದೃಷ್ಟಕರ ಸಂಗತಿಯೆಂದರೆ, ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ನಾವು ಇನ್ನೂ ಚರ್ಚಿಸುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದೆ.

ಸುಪ್ರೀಂ ಕೋರ್ಟ್‌ನ ಆದೇಶವು ನಿರ್ದಿಷ್ಟವಾಗಿ ಮಹಿಳಾ ವಿದ್ಯಾರ್ಥಿಗಳು ಹಿಜಾಬ್ ಅಥವಾ ಕ್ಯಾಪ್‌ಗಳನ್ನು ಧರಿಸುವುದರ ಮೇಲೆ ನಿರ್ಬಂಧಗಳನ್ನು ವಿಧಿಸಿದ ಕಾಲೇಜಿನ ಸುತ್ತೋಲೆಯ ಭಾಗವನ್ನು ತಡೆಹಿಡಿಯುತ್ತದೆ. ಕಾಲೇಜಿನ ನಿರ್ಧಾರವನ್ನು ಪ್ರಶ್ನಿಸಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಕೋರ್ಟ್ ನೋಟಿಸ್ ಜಾರಿ ಮಾಡಿದೆ.ಇದಲ್ಲದೆ, ತನ್ನ ಆದೇಶವನ್ನು ಯಾವುದೇ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಾಲಯ ಒತ್ತಿ ಹೇಳಿದೆ. ಈ ವಿಷಯದ ಮುಂದಿನ ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!