ಸುಪ್ರೀಂ ಕೋರ್ಟ್ ಚಾಟಿ: ದೊಡ್ಡ ಗಾತ್ರದಲ್ಲಿ ಜಾಹಿರಾತು ನೀಡಿ ಕ್ಷಮೆ ಕೋರಿದ ಪತಂಜಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಪತಂಜಲಿ ಸಂಸ್ಥೆಯ ತಪ್ಪುದಾರಿಗೆಳೆಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್ ದೇವ್ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದು, ಸಂಸ್ಥೆ ಜಾಹಿರಾತು ನೀಡುತ್ತಿದ್ದ ಅಳತೆಯಲ್ಲೇ ಕ್ಷಮಾಪಣೆ ಪತ್ರದ ಜಾಹಿರಾತು ನೀಡಿದ್ದಾರೆ.

ತಪ್ಪುದಾರಿಗೆಳೆಯುವ ಜಾಹೀರಾತು (Advertisements) ಪ್ರಕರಣದಲ್ಲಿ ಪತಂಜಲಿ ಆಯುರ್ವೇದ (Patanjali Ayurved) ಸಂಸ್ಥೆ ಹಾಗೂ ಅದರ ಸಂಸ್ಥಾಪಕರಾದ ಬಾಬಾ ರಾಮ್‌ದೇವ್‌ (Baba Ramdev) ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ಚಾಟಿ ಬೀಸಿ, ಕ್ಷಮೆಯಾಚನೆಯ ಜಾಹೀರಾತು ಪ್ರಕಟಿಸಬೇಕು ಎಂದು ಸೂಚಿಸಿತ್ತು ಗಾತ್ರವು ಅದರ ಔಷಧಗಳ ದಾರಿತಪ್ಪಿಸುವ ಜಾಹೀರಾತುಗಳಷ್ಟು ದೊಡ್ಡದಾಗಿದೆಯೇ ಎಂದು ನ್ಯಾಯಾಲಯ ಕೇಳಿತ್ತು.

ಇದೀಗ ಯೋಗ ಗುರು ಬಾಬಾ ರಾಮದೇವ್‌ (Yoga Guru Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ಅವರು, ನಮ್ಮ ಜಾಹೀರಾತುಗಳನ್ನು ಪ್ರಕಟಿಸುವಲ್ಲಿ ಮಾಡಿದ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಮುಂದೆ ಅಂತಹ ದೋಷಗಳು ಪುನರಾವರ್ತನೆಯಾಗುವುದಿಲ್ಲ. ಇದು ನೀಡುತ್ತಿರುವ ಹೃದಯಪೂರ್ವಕ ಬದ್ಧತೆ ಎಂದು ಪ್ರಕಟಿಸಿ ಕ್ಷಮೆ ಕೋರಿದ್ದಾರೆ.

ಕ್ಷಮಾಪಣಾ ಪತ್ರದಲ್ಲಿ ಭಾರತದ ಸುಪ್ರೀಂ ಕೋರ್ಟ್‌ ನಿರ್ದೇಶನಗಳು / ಆದೇಶಗಳ ಅನುಸರಣೆ ಅಥವಾ ಅವಿಧೇಯತೆಗಾಗಿ ಬೇಷರತ್ತಾಗಿ ಕ್ಷಮೆಯಾಚಿಸುವುದಾಗಿ ರಾಮ್‌ದೇವ್‌ ಮತ್ತು ಬಾಲಕೃಷ್ಣ ಅವರು ವೈಯಕ್ತಿಕವಾಗಿ ಮತ್ತು ಪತಂಜಲಿ ಆಯುರ್ವೇದ ಸಂಸ್ಥೆ ಪರವಾಗಿ ಹೇಳಿಕೆ ನೀಡಿದ್ದಾರೆ.

ಅಲ್ಲದೆ 2023ರ ನವೆಂಬರ್‌ 22ರಂದು ನಡೆಸಿದ ಸಭೆ, ಪತ್ರಿಕಾಗೋಷ್ಠಿಗಾಗಿ ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ. ನಮ್ಮ ಜಾಹೀರಾತುಗಳನ್ನು ಪ್ರಕಟಿಸುವಲ್ಲಿ ಮಾಡಿದ ತಪ್ಪಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ ಮತ್ತು ಅಂತಹ ತಪ್ಪುಗಳು ಪುನರಾವರ್ತನೆಯಾಗುವುದಿಲ್ಲ.ಗೌರವಾನ್ವಿತ ನ್ಯಾಯಾಲಯದ ನಿರ್ದೇಶನಗಳು ಮತ್ತು ಸೂಚನೆಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಪಾಲಿಸಲು ನಾವು ಬದ್ಧರಾಗಿದ್ದೇವೆ. ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯಲು ಮತ್ತು ನ್ಯಾಯಾಲಯ / ಸಂಬಂಧಿತ ಪ್ರಾಧಿಕಾರಗಳ ಅನ್ವಯವಾಗುವ ಕಾನೂನುಗಳು ಮತ್ತು ನಿರ್ದೇಶನಗಳನ್ನು ಅನುಸರಿಸುತ್ತೇವೆ ಎಂದೂ ಅವರು ಜಾಹೀರಾತಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!