ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾದ ವಿವಾದದ ನಡುವೆಯೇ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾ. ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವಾಪಾಸ್ ಕಳುಹಿಸಲು ಶಿಫಾರಸು ಮಾಡಿದೆ.
ಮಾರ್ಚ್ 20ರಂದು ಮತ್ತು ಇಂದು ನಡೆದ ಸಭೆಗಳಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್‌ನಲ್ಲಿರುವ ಹೈಕೋರ್ಟ್ ಆಫ್ ಜ್ಯುಡಿಕೇಚರ್‌ಗೆ ವಾಪಸ್ ಕಳುಹಿಸಲು ಶಿಫಾರಸು ಮಾಡಿದೆ.
ನಿವಾಸದಲ್ಲಿ ಭಾರಿ ಪ್ರಮಾಣದ ನಗದು ರಾಶಿ ಪತ್ತೆಯಾದ ನಂತರ ನ್ಯಾಯಮೂರ್ತಿ ವರ್ಮಾ ಅವರನ್ನು ಇಂದು ದೆಹಲಿ ಹೈಕೋರ್ಟ್ ಅವರು ಯಾವುದೇ ನ್ಯಾಯಾಂಗ ಕೆಲಸಗಳನ್ನು ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಈ ನಿರ್ಧಾರವನ್ನು ದೃಢೀಕರಿಸುವ ಅಧಿಕೃತ ಅಧಿಸೂಚನೆಯನ್ನು ದೆಹಲಿ ಹೈಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು.
ಮೂಲಗಳ ಪ್ರಕಾರ, ಯಶವಂತ್ ಅವರಿಗೆ ನಿಯೋಜಿಸಲಾದ ಎಲ್ಲಾ ಪ್ರಕರಣಗಳನ್ನು ಈಗ ಇತರ ವಿಭಾಗೀಯ ಪೀಠಗಳಿಗೆ ಮರುಹಂಚಿಕೆ ಮಾಡಲಾಗಿದೆ. ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರು ನ್ಯಾಯಮೂರ್ತಿ ವರ್ಮಾ ಅವರನ್ನು ನ್ಯಾಯಾಂಗ ಕೆಲಸದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳುವ ಆದೇಶ ಹೊರಡಿಸಿದ್ದಾರೆ.ಇತ್ತೀಚಿನ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಆದೇಶದವರೆಗೆ ಯಶವಂತ್ ವರ್ಮಾ ಅವರ ನ್ಯಾಯಾಂಗ ಕೆಲಸವನ್ನು ‘ತಕ್ಷಣ ಜಾರಿಗೆ ಬರುವಂತೆ’ ಹಿಂತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಹೈಕೋರ್ಟ್ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.