ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್ ಮಹತ್ವದ ಹೇಳಿಕೆ ನೀಡಿದೆ.
ಪ್ರತಿಯೊಬ್ಬರಿಗೂ ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕಿದೆ. ಸರ್ಕಾರವು ಸಲಿಂಗ ಸಂಬಂಧಗಳಿಗೆ ಕಾನೂನು ಸ್ಥಾನಮಾನ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಲಿಂಗ ದಂಪತಿಗೆ ತಾರತಮ್ಯ ಮಾಡದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಕೋರ್ಟ್ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್.ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು 10 ದಿನಗಳ ವಿಚಾರಣೆ ಬಳಿಕ ತೀರ್ಪನ್ನು ಮೇ 11ರಂದು ಕಾಯ್ದಿರಿಸಿತ್ತು.
ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಎಸ್ ರವೀಂದ್ರ ಭಟ್, ನ್ಯಾ.ಹಿಮಾ ಕೊಹ್ಲಿ, ನ್ಯಾ.ಪಿ.ಎಸ್. ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠವು ಇಂದು ತೀರ್ಪು ನೀಡಿದೆ.