ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE), ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) , ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ಮೂಲಕ ನಡೆಸಲಾಗುವ X ಮತ್ತು XII ತರಗತಿಗಳ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ .
ಇಂದು ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ಪೀಠವು 10 ಮತ್ತು 12 ನೇ ತರಗತಿಯ ಆಫ್‌ಲೈನ್ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತು.
ಇಂತಹ ಅರ್ಜಿಯು ‘ಸುಳ್ಳು ಭರವಸೆ’ ಮತ್ತು ‘ಗೊಂದಲ’ವನ್ನು ಸೃಷ್ಟಿಸುತ್ತದೆ ಎಂದು ಗಮನಿಸಿತು.’ಇದು ಸುಳ್ಳು ಭರವಸೆಗಳನ್ನು ಮಾತ್ರ ಸೃಷ್ಟಿಸುತ್ತದೆ, ಇದು ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಗೊಂದಲವನ್ನು ಸೃಷ್ಟಿಸುತ್ತದೆ’ ಎಂದು ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ಪೀಠ ಹೇಳಿದೆ.
‘ವಿದ್ಯಾರ್ಥಿಗಳು ತಮ್ಮ ಕೆಲಸವನ್ನು ಮಾಡಲಿ ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಲಿ’ ಎಂದು ಪೀಠವು ಹೇಳಿದೆ.
ಕಾರ್ಯಕರ್ತೆ ಅನುಭಾ ಶ್ರೀವಾಸ್ತವ ಸಹಾಯ್ ಮತ್ತು ಇತರರು ಸಲ್ಲಿಸಿದ ಮನವಿಯನ್ನು ತುರ್ತು ವಿಚಾರಣೆಗಾಗಿ ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು.
ಏಪ್ರಿಲ್ 26 ರಿಂದ 10 ನೇ ತರಗತಿ ಮತ್ತು 12 ನೇ ತರಗತಿಗೆ ಎರಡು ಬೋರ್ಡ್ ಪರೀಕ್ಷೆಗಳನ್ನು ನಡೆಸಲು CBSE ನಿರ್ಧರಿಸಿದೆ.