ಸ್ಟಾಲಿನ್ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾ: ಆರ್‌ಎಸ್‌ಎಸ್ ಪಥಸಂಚಲನಕ್ಕೆ ಸುಪ್ರೀಂ ಅನುಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ.

ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್‌ ಮತ್ತು ಪಂಕಜ್‌ ಮಿತ್ತಲ್‌ ಅವರಿದ್ದ ಪೀಠ ಇಂದು ವಜಾಗೊಳಿಸಿದೆ.

ಆರ್‌ಎಸ್ಎಸ್‌ ಪ್ರಾತಿನಿಧ್ಯವನ್ನು ಪರಿಗಣಿಸಿ, ಕಾರ್ಯಕ್ರಮಗಳನ್ನು ಆಯೋಜಿಸಲು ಯಾವುದೇ ಷರತ್ತುಗಳಿಲ್ಲದೆ ಅವಕಾಶ ಕಲ್ಪಿಸುವಂತೆ 2022ರ ಸೆಪ್ಟೆಂಬರ್‌ 22ರಂದು ಪೊಲೀಸರಿಗೆ ನೀಡಿದ್ದ ನಿರ್ದೇಶನವನ್ನು ಮದ್ರಾಸ್‌ ಹೈಕೋರ್ಟ್‌ನ ವಿಭಾಗೀಯ ಪೀಠವು ಫೆಬ್ರುವರಿ 10ರಂದು ಪುನರುಚ್ಛರಿಸಿತ್ತು.

ಆರ್‌ಎಸ್‌ಎಸ್‌ ಪಥಸಂಚಲನ ಮತ್ತು ಸಾರ್ವಜನಿಕ ಸಭೆಗಳನ್ನು ಸಂಪೂರ್ಣವಾಗಿ ವಿರೋಧಿಸುವುದಿಲ್ಲ. ಆದರೆ ಗುಪ್ತಚರ ಮಾಹಿತಿ ಪ್ರಕಾರ ಎಲ್ಲ ಬೀದಿಗಳಲ್ಲಿಯೂ ಮೆರವಣಿಗೆ ನಡೆಸಲು ಸಾಧ್ಯವಿಲ್ಲ ಎಂದು ತಮಿಳುನಾಡು ಸರ್ಕಾರ ಮಾರ್ಚ್‌ 3 ರಂದು ಸುಪ್ರೀಂ ಕೋರ್ಟ್‌ಗೆ ಹೇಳಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!