ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಅವರ ಬಂಧನವನ್ನು ಕಾನೂನುಬದ್ಧಗೊಳಿಸಿರುವ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಅಲ್ಲದೇ ಆಗಸ್ಟ್ 12ರ ವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ಅನುಮತಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನನ್ನು ಇಡಿ ಬಂಧಿಸಿರುವುದನ್ನು ಪ್ರಶ್ನಿಸಿ ಬಾಲಾಜಿ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಕೋರ್ಟ್, ಬಂಧನಕ್ಕೆ ಆದೇಶ ನೀಡಿತ್ತು. ಈ ಆದೇಶದ ವಿರುದ್ಧ ಸೆಂಥಿಲ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅಲ್ಲೂ ಅವರಿಗೆ ನಿರಾಸೆಯಾಗಿದೆ.
ಮದ್ರಾಸ್ ಹೈಕೋರ್ಟ್‌ನ ಆದೇಶಗಳ ಸಿಂಧುತ್ವವನ್ನು ಪ್ರಶ್ನಿಸಿ ಸಚಿವರು ಅರ್ಜಿ ಸಲ್ಲಿಸಿದ್ದರು. ಆದರೆ ವಿಚಾರಣೆಗೆ ಒಳಪಟ್ಟಿರುವ ಸಚಿವರ ಬಂಧನ ತಪ್ಪಲ್ಲ ಎಂದು ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತು. ಅಲ್ಲದೇ ವಿಭಾಗೀಯ ಪೀಠದ ನ್ಯಾಯಾಧೀಶರು ಜುಲೈ 14 ರಂದು ಇಡಿ ಕಸ್ಟಡಿಗೆ ಸಚಿವರನ್ನು ನೀಡಿದ ಆದೇಶವನ್ನೂ ಸಮ್ಮತಿಸಿತ್ತು.