ಆಲ್ಟ್‌ ನ್ಯೂಸ್‌ನ ಮೊಹಮದ್‌ ಜುಬೇರ್‌ಗೆ ಜಾಮೀನು ವಿಸ್ತರಿಸಿದ ಸುಪ್ರಿಂ ಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 7 ರಂದು ನಡೆಯಲಿದೆ.

ಜುಬೇರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು, ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ಅವರಿಗೆ ಈಗಾಗಲೇ ಮಧ್ಯಂತರ ಜಾಮೀನು ನೀಡಿದ್ದು, ರಾಜ್ಯ ಸರ್ಕಾರ ಸಲ್ಲಿಸಲಿರುವ ಪ್ರತಿ ಅಫಿಡವಿಟ್‌ಗೆ ತಮ್ಮ ಉತ್ತರವನ್ನು ಸಲ್ಲಿಸಲು ಬಯಸುತ್ತೇವೆ ಎಂದು ಹೇಳಿದ್ದು, ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಜುಬೇರ್ ಸಲ್ಲಿಸಿರುವ ಮನವಿಗೆ ಉತ್ತರ ನೀಡಲು ಬಯಸುವುದಾಗಿ ತಿಳಿಸಿದ್ದಾರೆ.
ನಂತರ ಪೀಠವು ಸೆಪ್ಟೆಂಬರ್ 7 ರಂದು ಅಂತಿಮ ವಿಚಾರಣೆಗೆ ದಿನಾಂಕವನ್ನು ನಿಗದಿ ಮಾಡಿದ್ದು ನಾಲ್ಕು ವಾರಗಳಲ್ಲಿ ಉತ್ತರ ಪ್ರದೇಶ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಕೇಳಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!