ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡೋದಿಲ್ಲ ಎಂದು ಹೇಳಿದೆ.
ಸಿಬಿಐ ಪ್ರಕರಣದ ತನಿಖೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಈಗಲೂ ಮುಂದುವರಿಯಲಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತನಿಖೆಗೆ ಕರ್ನಾಟಕ ಹೈ ಕೋರ್ಟ್ ತಡೆಯಾಜ್ಞೆ ನೀಡಿತ್ತು.
ಹೀಗಾಗಿ ತಡೆಯಾಜ್ಞೆ ತೆರವುಗೊಳಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ.