ಪೆಗಾಸಸ್‌ ವಿವಾದ ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಿದ ಸುಪ್ರಿಂ ಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಪೆಗಾಸಸ್‌ ವಿವಾದದ ಕುರಿತು ತನಿಖೆ ನಡೆಸಲು ನ್ಯಾಯಾಲಯದಿಂದ ನೇಮಕಗೊಂಡ ಸಮಿತಿಗೆ ಸುಪ್ರಿಂ ಕೋರ್ಟ್‌ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ. ರಾಜಕೀಯ ನಾಯಕರು ಸೇರಿದಂತೆ ವಿವಿಧ ಪ್ರಮುಖ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲು ಪೆಗಾಗಸಸ್‌ ಸಾಫ್ಟ್‌ ವೇರ್‌ ಬಳಕೆಯಾಗಿರುವ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ರವೀಂದ್ರನ್‌ ಅವರ ನೇತೃತ್ವದಲ್ಲಿ 2021 ಅಕ್ಟೋಬರ್‌ ನಲ್ಲಿ ಸಮಿತಿಯೊಂದನ್ನು ರಚಿಸಿ ತನಿಖೆಗೆ ಅದೇಶ ನೀಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಮುಖ್ಯನ್ಯಾಯಮೂರ್ತಿ ಎನ್.ವಿ ರಮಣ ಅವರು ʼಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಾಧನಗಳನ್ನು ಪರೀಕ್ಷಿಸಲು ಸಮಿತಿಯು ತನ್ನದೇ ಆದ ಸಾಫ್ಟ್‌ ವೇರ್‌ ಅಭಿವೃದ್ಧಿ ಪಡಿಸಿದೆ, ಈ ಸಂಬಂಧ ವಿವಿಧ ಸರ್ಕಾರಿ ಏಜನ್ಸಿಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆʼ ಎಂದು ಹೇಳಿದ್ಧಾರೆ. ಇನ್ನು ಈ ಕುರಿತು ತಾಂತ್ರಿಕ ಸಮಿತಿಯು ಪೆಗಾಸಸ್‌ ಸಾಧನಗಳ ಪರಿಶೀಲನೆಗೆ ಸ್ಟಾಂಡರ್ಡ್‌ ಆಪರೇಟಿಂಗ್‌ ವಿಧಾನಗಳನ್ನು ಅಂತಿಮಗೊಳಿಸಲಾಗುತ್ತಿದ್ದು ಮೇ ಅಂತ್ಯದ ವೇಳೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!