ಮುಸ್ಲಿಮರ 2ಬಿ ಮೀಸಲಾತಿ ರದ್ದು: ರಾಜ್ಯ ಸರ್ಕಾರದ ಆದೇಶಕ್ಕೆ ಸುಪ್ರೀಂ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಸ್ಲಿಮರ 2ಬಿ ಮೀಸಲಾತಿಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಕೆಎಂ ಜೋಸೆಫ್ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿ ರದ್ದುಗೊಳಿಸಿ, ಇದನ್ನ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ತಲಾ ಶೇ.2ರಂತೆ ಸಮನಾಗಿ ಹಂಚಿಕೆ ಮಾಡಿತ್ತು. ನಂತರ ಮುಸ್ಲಿಮರನ್ನು ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ ಮೀಸಲಾತಿ ನೀಡಲು ನಿರ್ಧರಿಸಿ, 2ಬಿಯನ್ನು ರದ್ದುಗೊಳಿಸಿತ್ತು.

ರಾಜ್ಯ ಸರ್ಕಾರದ ಈ ನಿರ್ಧಾರವನ್ನ ಖಂಡಿಸಿ ಮುಸ್ಲಿಂ ಸಮುದಾಯದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಕುರಿತು ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ರಾಜ್ಯ ಸರ್ಕಾರದ ಈ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!