ಸಿಎಂ ಸಿದ್ಧರಾಮಯ್ಯ ಸಹಿತ ಕಾಂಗ್ರೆಸ್ ಮುಖಂಡರಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಕೋವಿಡ್ ನಿಯಮ ಉಲ್ಲಂಘಿಸಿ, ಪ್ರತಿಭಟನೆ ಮಾಡಿದ್ದ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

2022ರಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು.

ಇಂದು ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು ಸಿಎಂ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!