ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನಲ್ಲಿರುವ ಕೇತಗಾನಹಳ್ಳಿಯಲ್ಲಿನ ಭೂವತೋರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಹೈಕೋರ್ಟ್‌ನಲ್ಲಿ ದಾಖಲಿಸಿರುವ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕವಾಗಿ ತಡೆ ನೀಡಿದೆ.

ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಾಮೂರ್ತಿ.ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಕುಮಾರಸ್ವಾಮಿ ಅವರ ಮನವಿ ಪರಿಗಣಿಸಿದ ನ್ಯಾಯಾಲಯ, ಮಾರ್ಚ್ 27 ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು.

ಹಿಂದಿನ ರಾಮನಗರ ಜಿಲ್ಲೆ ಬಿಡದಿ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರ ವಿರುದ್ಧದ ಭೂ ಕಬಳಿಕೆ ಆರೋಪ ಸಂಬಂಧ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್‌ ಆರ್‌ ಹಿರೇಮಠ ಅವರು ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಅರ್ಜಿ ವಿಚಾರಣೆಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಅನುಮತಿ ನೀಡಿತ್ತು. ಆದ್ರೆ, ಹೈಕೋರ್ಟ್​ ನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!