April 13, 2026
Monday, April 13, 2026
spot_img

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದ್ದು, ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ನಿರ್ದೇಶಿಸಿದ್ದ ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಮೈಸೂರು ಡಿಸಿಯಾಗಿದ್ದ ಸಂದರ್ಭ ರೋಹಿಣಿ ಸಿಂಧೂರಿ ಅವರು ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪ ಕೇಳಿಬಂದಿದ್ದು, ಈ ಸಂಬಂಧ ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ಹೈಕೋರ್ಟ್ ನಿರ್ದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮೈಸೂರು ಡಿಸಿಯಾಗಿದ್ದ ಸಂದರ್ಭ ರೋಹಿಣಿ ಸಿಂಧೂರಿ ಅವರು ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ಚಿಲ್ಲರೆ ಮಾರುಕಟ್ಟೆಯಲ್ಲಿ 10 ರಿಂದ 13ಗೆ ರೂಪಾಯಿಗೆ ಸಿಗುವ ಬ್ಯಾಗ್​ಗಳನ್ನು 52 ರೂ. ನೀಡಿ ಖರೀದಿಸಿದ್ದಾರೆ. ಹೀಗಾಗಿ ಕೋಟ್ಯಾಂತರ ರೂಪಾಯಿ ಅಕ್ರಮವಾಗಿದೆ ಎಂದು ಜೆಡಿಎಸ್​​ ನಾಯಕ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !