ಭೀಮಾ ಕೋರೆಗಾಂವ್ ಕೇಸ್: ಆರೋಪಿ ವರವರ ರಾವ್‌ಗೆ ಜಾಮೀನು ನೀಡಿದ ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕ್ರಾಂತಿಕಾರಿ ಬರಹಗಾರ, ಕವಿ ಪಿ. ವರವರ ರಾವ್ (83)ಗೆ ಸುಪ್ರೀಂಕೋರ್ಟ್​ ಜಾಮೀನು ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲಾಗಿದ್ದ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ರಾವ್ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದೆ.

ರಾವ್ ಅವರ ವಯಸ್ಸು, ಆರೋಗ್ಯ ಸ್ಥಿತಿ ಹಾಗೂ ಕಳೆದ ಎರಡೂವರೆ ವರ್ಷಗಳ ವಾಸ್ತವಿಕ ಕಸ್ಟಡಿ ಅವಧಿಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಪೀಠವು, ಈ ಪ್ರಕರಣದಲ್ಲಿ ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ ಮತ್ತು ಆರೋಪಪಟ್ಟಿ ಸಲ್ಲಿಸಲಾಗಿದ್ದರೂ ಆರೋಪಗಳನ್ನು ರೂಪಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!