ಜಾಮೀನಿನಲ್ಲಿರುವ ದರ್ಶನ್ ಸೇರಿ ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ನಿಂದ ನೊಟೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು.

ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು ನಡೆದಿದೆ.  ಈ ವೇಳೆ ಸುಪ್ರೀಂಕೋರ್ಟ್ ಏಳು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಏಳು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಬೆಂಗಳೂರು ಪೊಲೀಸರು ಸರ್ಕಾರದ ಒಪ್ಪಿಗೆ ಪಡೆದು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದರು. ಇದರ ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು ತಮ್ಮ ವಾದ ಮಂಡಿಸಿದ್ದಾರೆ. ‘ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಿ’ ಎಂದು ಮನವಿ ಮಾಡಿದ್ದಾರೆ.

7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ‘ಉಳಿದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೆ ಇದು ಅನ್ವಯಿಸುವುದಿಲ್ಲ. ಹೈಕೋರ್ಟ್ ಫೈಂಡಿಂಗ್ಸ್ ಅನ್ವಯ ಆಗುವುದಿಲ್ಲ’ ಎಂದು ಸುಪ್ರೀಕೋರ್ಟ್ ಅಭಿಪ್ರಾಯಪಟ್ಟಿದೆ. ಸದ್ಯ ವಿಚಾರಣೆಯನ್ನು ಕೋರ್ಟ್ ಮುಂದಕ್ಕೆ ಹಾಕಿದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!