ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಶಾಂತ್ ಮಿಶ್ರಾ, ಕೆ.ವಿ. ವಿಶ್ವನಾಥನ್ ಪ್ರಮಾಣ ವಚನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಂಧ್ರಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಹಾಗೂ ಹಿರಿಯ ವಕೀಲ ಕೆ.ವಿ. ವಿಶ್ವನಾಥನ್‌ ಅವರು ಇಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಪ್ರಮಾಣ ವಚನ ಬೋಧಿಸಿದ್ದು, ಇದೀಗ ಸುಪ್ರೀಂ ಕೋರ್ಟ್​ ಇಬ್ಬರು ಹೊಸ ನ್ಯಾಯಾಧೀಶರೊಂದಿಗೆ ಒಟ್ಟು 34 ನ್ಯಾಯಾಧೀಶರ ಪೂರ್ಣ ಬಲವನ್ನು ಹೊಂದಿದೆ.

ಮೇ 16ರಂದು ನ್ಯಾಯಮೂರ್ತಿ ಮಿಶ್ರಾ ಮತ್ತು ವಿಶ್ವನಾಥನ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ಆದೇಶ ಪ್ರತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಚೇರಿಯಿಂದ ಗುರುವಾರ ಹೊರಡಿಸಲಾಗಿತ್ತು. ಕೇಂದ್ರವು ಈ ಇಬ್ಬರ ನೇಮಕಾತಿ ಕುರಿತು ಮೇ 18ರಂದು ಅಧಿಸೂಚನೆ ಹೊರಡಿಸಿತ್ತು.

ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ನೇರಪ್ರಸಾರ ಮಾಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!