ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮೊಹಮ್ಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಈ ನೋಟಿಸ್ ನೀಡಿದೆ. ನನಗೆ ಮತ್ತು ಮಗಳಿಗೆ ಕೋಲ್ಕತ್ತಾ ಹೈಕೋರ್ಟ್ ಮಂಜೂರು ಮಾಡಿರುವ ಜೀವನಾಂಶ ಹೆಚ್ಚಿಸುವಂತೆ ಕೋರಿ ಜಹಾನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಕಲ್ಕತ್ತಾ ಹೈಕೋರ್ಟ್ ನೀಡಿದ ಹಿಂದಿನ ತೀರ್ಪನ್ನು ಜಹಾನ್ ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ. ಹೈಕೋರ್ಟ್ ತಿಂಗಳಿಗೆ 1.5 ಲಕ್ಷ ರೂ. ಮತ್ತು ತಮ್ಮ ಮಗಳ ಆರೈಕೆಗಾಗಿ 2.5 ಲಕ್ಷ ರೂ.ಗಳನ್ನು ನೀಡಿತ್ತು. ಈ ಹಣವು ಸಾಕಾಗುವುದಿಲ್ಲ ಎಂದು ಜಹಾನ್ ಸುಪ್ರೀಂನಲ್ಲಿ ತಿಳಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಶಮಿ ಇಬ್ಬರಿಗೂ ಸೂಚಿಸಿದೆ. ಈ ಅವಧಿಯ ನಂತರ ಈ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ತಿಳಿಸಿದೆ.

