ಹೊಸದಿಗಂತ ಡಿಜಿಟಲ್ ಡೆಸ್ಕ್:
ಸನಾತನ ಧರ್ಮ ನಿರ್ಮೂಲನೆ ಮಾಡಬೇಕೆಂಬ ಹೇಳಿಕೆ ವಿರುದ್ಧ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್ ಮತ್ತು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸನಾತನ ಧರ್ಮ ಡೆಂಘಿ, ಮಲೇರಿಯಾ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆಗಳು ದೇಶದಲ್ಲಿ ವಿವಾದಕ್ಕೆ ಕಾರಣವಾಯಿತು. ಈ ಕಾಮೆಂಟ್‌ಗಳ ಕುರಿತು ಶುಕ್ರವಾರ (ಸೆಪ್ಟೆಂಬರ್ 22, 2023) ಸುಪ್ರೀಂ ಕೋರ್ಟ್ ಉದಯನಿಧಿ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಚೆನ್ನೈನ ವಕೀಲರೊಬ್ಬರು ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ಉದಯನಿಧಿ ಹಾಗೂ ತಮಿಳುನಾಡಿನ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಉದಯನಿಧಿ ಹೇಳಿಕೆ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದಲ್ಲದೆ ತೀವ್ರ ವಿವಾದಕ್ಕೂ ಕಾರಣವಾಗಿತ್ತು. ಬಿಜೆಪಿ ಮುಖಂಡರು ಹಾಗೂ ಹಿಂದೂ ಸಂಘಗಳು ಉದಯನಿಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮೇಲಾಗಿ ಉದಯನಿಧಿ ತಲೆಗೆ 10 ಕೋಟಿ ರೂ.ಗಳನ್ನು ಬಹುಮಾನವನ್ನೂ ಅರ್ಚಕ ಪರಮಹಂಸ ಆಚಾರ್ಯ ಘೋಷಿಸಿದ್ದರು.