ಸುಪ್ರೀಂ ಕೋರ್ಟ್‌ ಆದೇಶ: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಗುರುವಾರ ನೀಟ್‌ ಯುಜಿ 2024 (NEET UG 2024) ಪರೀಕ್ಷೆಯ ಪರಿಷ್ಕೃತ ಫಲಿತಾಂಶ ಪ್ರಕಟಿಸಿದೆ.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ.

ಜೊತೆಗೆ ನೀಟ್‌ ಕೌನ್ಸೆಲಿಂಗ್‌ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದುಬಂದಿದೆ.

ನೀಟ್‌ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ
ನೀಟ್‌ ಅಧಿಕೃತ ವೆಬ್‌ಸೈಟ್‌ exams.nta.ac.in. ಗೆ ಭೇಟಿ ನೀಡಿ
NEET UG 2024 revised result ಎಂಬ ನೋಟಿಫಿಕೇಶನ್‌ ಮೇಲೆ ಕ್ಲಿಕ್‌ ಮಾಡಿ
ಇದಾದ ಬಳಿಕ ಹೊಸ ವಿಂಡೋ ಓಪನ್‌ ಆಗಲಿದ್ದು, ಲಾಗಿನ್‌ ಮಾಹಿತಿ ಸೇರಿ ಹಲವು ಮಾಹಿತಿ ಒದಗಿಸಿ
ಆಗ ನಿಮ್ಮ ಸ್ಕ್ರೀನ್‌ ಮೇಲೆ ನೀಟ್‌ ಯುಜಿ ಫಲಿತಾಂಶ ಗೋಚರವಾಗಲಿದೆ
ಭವಿಷ್ಯದ ರೆಫರೆನ್ಸ್‌ಗಳಿಗಾಗಿ ನೀಟ್‌ ಪರೀಕ್ಷೆಯ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಳ್ಳಿ

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!