January 30, 2026
Friday, January 30, 2026
spot_img

ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ ಒದಗಿಸಲು ಸುಪ್ರೀಂ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಒದಗಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರನ್ನೊಳಗೊಂಡ ನ್ಯಾಯ ಪೀಠ, ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಹೇಳಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದ 21 ನೇ ವಿಧಿಯಡಿ ನೀಡಲಾಗಿರುವ ಬದುಕುವ ಹಕ್ಕಿನ ಭಾಗ. ಖಾಸಗಿ ಶಾಲೆಗಳು ಈ ಸೌಲಭ್ಯ ಒದಗಿಸಲು ವಿಫಲವಾದರೆ, ಮಾನ್ಯತೆ ರದ್ದುಗೊಳಿಸಲಾಗುವುದು. ಹೆಣ್ಣು ಮಕ್ಕಳಿಗೆ ಶೌಚಾಲಯ ಮತ್ತು ಉಚಿತ ಸ್ಯಾನಿಟರಿ ಪ್ಯಾಡ್‌ ಒದಗಿಸಲು ಸರ್ಕಾರಗಳು ವಿಫಲವಾದರೆ ಅದನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯ ಪೀಠ ಹೇಳಿದೆ.

ಅಲ್ಲದೇ, ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ ವಿಶೇಷಚೇತನರ ಸ್ನೇಹಿ ಶೌಚಾಲಯ ಒದಗಿಸಬೇಕು ಎಂದು ಹೇಳಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯ ಹದಿಹರೆಯದ ಬಾಲಕಿಯರಿಗೆ ಕೇಂದ್ರ ಸರ್ಕಾರ ಮುಟ್ಟಿನ ನೈರ್ಮಲ್ಯ ನೀತಿ ಜಾರಿಗೆ ತರಬೇಕು ಎಂದು ಕೋರಿ ಜಯಾ ಠಾಕೂರ್ ಅವರು ಡಿಸೆಂಬರ್ 10, 2024 ರಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !