ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ: ರಾಜ್ಯ ಸರ್ಕಾರದ ಮೇಲ್ಮನವಿ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗಳ ಮೇಲಿನ ನಿಷೇಧ ತೆರವುಗೊಳಿಸಿದ್ದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗಳು ಮುಂದುವರಿಯಲು ಇದ್ದ ಕಾನೂನು ಅಡೆತಡೆ ನಿವಾರಣೆಯಾಗಿದೆ. ನ್ಯಾಯಮೂರ್ತಿಗಳಾದ ಸತೀಶ್‌ ಚಂದ್ರ ಶರ್ಮಾ ಮತ್ತು ಎನ್‌. ಕೋಟೀಶ್ವರ್‌ ಸಿಂಗ್‌ ಅವರನ್ನೊಳಗೊಂಡ ಪೀಠವು ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಜನವರಿ 23, 2026ರಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಎತ್ತಿಹಿಡಿದಿದೆ. … Continue reading ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ: ರಾಜ್ಯ ಸರ್ಕಾರದ ಮೇಲ್ಮನವಿ ವಜಾ