ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರುವ ಹರಿಸುವ ವಿಚಾರವಾಗಿ ತುಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಕೈಗೆತ್ತುಕೊಳ್ಳಲಾಗಿತ್ತು. ಆದರೆ ವಿಚಾರಣೆಯನ್ನು ಸೆಪ್ಟಂಬರ್ 21ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕವು ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಬಿ.ಆರ್. ಗವಾಯಿಯವರು ಇಂದು ಒಬ್ಬರು ನ್ಯಾಯಾಧೀಶರು ರಜೆಯಲ್ಲಿದ್ದಾರೆ. ಮುಂದಿನ ವಾರ ತಾವು (ಬಿ.ಆರ್. ಗವಾಯಿ) ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಸಿಜೆಐ ಪೀಠದ ಮುಂದೆ ಹೋಗಿ ಹೊಸ ಪೀಠಕ್ಕೆ ಮನವಿ ಮಾಡಲು ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿಗೆ ಸೂಚಿಸಿದರು.
ಇದಕ್ಕೆ ತಮಿಳುನಾಡು ಪರ ವಕೀಲರು, ನಿಮ್ಮದೇ ನ್ಯಾಯಪೀಠದಲ್ಲಿ ವಿಚಾರಣೆ ಮುಂದುವರಿಸಿ ಎಂದು ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸೆಪ್ಟಂಬರ್ 21ಕ್ಕೂ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದರು. ಅಲ್ಲದೇ ಅಂದಿನ ದಿನವೇ ಕರ್ನಾಟಕ ರೈತ ಸಂಘ ಸಲ್ಲಿಸಿದ್ದ ಅರ್ಜಿಯನ್ನೂ ಸಹ ವಿಚಾರಣೆ ಮಾಡುವುದಾಗಿ ಹೇಳಿದ್ದಾರೆ.
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು, ಕರ್ನಾಟಕವು ಪ್ರತಿದಿನ ಮುಂದಿನ ಹದಿನೈದು ದಿನಗಳಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿತ್ತು. CWMA ಆದೇಶಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು. 5 ಸಾವಿರ ಕ್ಯೂಸೆಕ್ ನೀರು ಸಾಲುವುದಿಲ್ಲ. 24 ಸಾವಿರ ಕ್ಯೂಸೆಕ್ ನೀರು ಬೇಕು ಎಂದು ಒತ್ತಡ ಹೇರಿತ್ತು. ಆದರೆ ಇದಕ್ಕೆ CWMA ಒಪ್ಪಿಗೆ ನೀಡಿರಲಿಲ್ಲ. ಇದೀಗ ಸುಪ್ರಿಂಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ಸರ್ಕಾರ, ಹೆಚ್ಚು ನೀರು ಬಿಡುವುದಕ್ಕೆ ಸೂಚಿಸುವಂತೆ ಮನವಿ ಮಾಡಿದೆ.