ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು ವಿಸ್ತರಣೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ಪೀಠವು ,ಈ ಕುರಿತು ನಾವು ಜಾಮೀನು ವಿಸ್ತರಿಸಲು ಸಾಧ್ಯವಿಲ್ಲ. ಅಸ್ಸಾಂನ ಗುವಾಹಟಿಯಲ್ಲಿರುವ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ.
ಪವನ್ ಖೇರಾ ಅವರಿಗೆ ಕೆಲ ದಿನಗಳ ಹಿಂದೆ ತೆಲಂಗಾಣ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸುಪ್ರೀಂ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಸಂಬಂಧ ಕೋರ್ಟ್ ಜಾಮೀನಿಗೆ ತಡೆ ನೀಡಿದ್ದು, ಜೊತೆಗೆ ಜಾಮೀನು ವಿಸ್ತರಿಸಲು ನಿರಾಕರಿಸಿದೆ.
ಅಸ್ಸಾಂ ಸಿಎಂ ಪತ್ನಿ ಮೂರು ಮೂರು ಪಾಸ್ಪೋರ್ಟ್ ಇಟ್ಟುಕೊಂಡಿದ್ದಾರೆ ಎಂದು ಖೇರಾ ಆರೋಪಿಸಿದ್ದರು. ದುಬೈನಲ್ಲಿ ಅಮೆರಿಕದದಲ್ಲೂ ಕಂಪನಿಯೊಂದರಲ್ಲಿ ಐಷಾರಾಮಿ ಆಸ್ತಿಗಳನ್ನು ಹೊಂದಿದ್ದಾರೆ ಎಂದುಆರೋಪಿಸಿದ್ದರು.



