ಕೇಜ್ರೀವಾಲ್ ಜಾಮೀನು ಅವಧಿ ವಿಸ್ತರಣೆಗೆ ಸುಪ್ರೀಂಕೋರ್ಟ್ ನಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸಲು ಸಲ್ಲಿಸಿದ್ದ ಅರವಿಂದ್ ಕೇಜ್ರಿವಾಲ್ ಅರ್ಜಿಯ ತುರ್ತು ವಿಚಾರಾಣೆಗೆ ಅನುಮತಿ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟು ತಿಹಾರ್ ಜೈಲಿನಲ್ಲಿದ್ದ ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಜೂನ್1ರವರೆಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಜೂ.2 ರಂದು ಕೇಜ್ರಿವಾಲ್ ವಾಪಸ್ಸು ಜೈಲಿಗೆ ಹೋಗಬೇಕಿತ್ತು.
ಮನವಿ ಪಟ್ಟಿಯ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳು ಕರೆ ನೀಡಿದರೆ ಸೂಕ್ತ ಎಂದು ರಜಾಕಾಲದ ನ್ಯಾಯಪೀಠ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!