ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಷಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಜೂನ್ 12 ರಂದು ಜಾಮೀನು ನೀಡಲು ದೆಹಲಿ ಹೈಕೋರ್ಟ್ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಷಾ ಸಲ್ಲಿಸಿರುವ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯ ಪೀಠವು ಎರಡು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ಸೂಚಿಸಿದೆ.
ಅಹ್ಮದ್ ಷಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್, ಅರ್ಜಿದಾರರು ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.
ಆದರೆ ಮಧ್ಯಂತರ ಜಾಮೀನು ಇಲ್ಲ ಎಂದು ನ್ಯಾಯಮೂರ್ತಿ ನಾಥ್ ಹೇಳಿದರು. ಬಳಿಕ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಎರಡು ವಾರ ಮುಂದೂಡಿತು.
ಭಾರತದ ವಿರುದ್ಧ ಪಿತೂರಿ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ, ಕಲ್ಲು ತೂರಾಟ ಮತ್ತು ಹಣ ಸಂಗ್ರಹ ಮತ್ತಿತರ ಆರೋಪದ ಮೇರೆಗೆ ಜೂನ್ 4, 2019ರಲ್ಲಿ ಅಹ್ಮದ್ ಷಾ ಅವರನ್ನು NIA ಬಂಧಿಸಿತು.