ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ (95) ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದಾರೆ. 1972 ರಿಂದ 1975 ರವರೆಗೆ ಅವರು ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಕೂಡ ಸೇವೆ ಸಲ್ಲಿಸಿದರು. 1991 ರಲ್ಲಿ ಅವರಿಗೆ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಲಾಗಿದೆ.
ಅವರು 1999 ರಿಂದ 2005 ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.