ವಿಜಯ್‌ ಮಲ್ಯಗೆ 2ಸಾವಿರ ಜುಲ್ಮಾನೆ 4 ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರಿಂ ಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಮತ್ತು 2000 ರೂ ಜುಲ್ಮಾನೆ ವಿಧಿಸಿದೆ.

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ USD 40 ಮಿಲಿಯನ್ ವರ್ಗಾವಣೆ ಮಾಡಿರುವ ಕುರಿತು ಮಲ್ಯ ಅವರು ನ್ಯಾಯಾಂಗ ನಿಂದನೆ ಆರೋಪದಲ್ಲಿ ದೋಷಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ನಾಲ್ಕು ವಾರಗಳಲ್ಲಿ ಬಡ್ಡಿ ಸಮೇತ 40 ಮಿಲಿಯನ್ ಡಾಲರ್‌ ಠೇವಣಿ ಮಾಡುವಂತೆ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ ಮತ್ತು ಅವರು ಹಾಗೆ ಮಾಡಲು ವಿಫಲವಾದರೆ ಅದು ಆಸ್ತಿಯನ್ನು ಜಪ್ತಿ ಮಾಡಿಕೊಳ್ಳಲಾಗುತ್ತದೆ ಎಂದೂ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!