ರಾಖಿ ಸಾವಂತ್ ಗೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್: ಬಂಧನದ ಭೀತಿಯಲ್ಲಿ ನಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್​ನ ನಟಿ ರಾಖಿ ಸಾವಂತ್ ಬಂಧನದ ಭೀತಿ ಎದುರಿಸುತ್ತಿದ್ದು, ತನ್ನ ಮಾಜಿ ಪತಿ ಆದಿಲ್ ಖಾನ್​ರ ಖಾಸಗಿ ವಿಡಿಯೋ ಸೋರಿಕೆ ಪ್ರಕರಣದಲ್ಲಿ ಇಂದು ಸುಪ್ರೀಂ ಕೋರ್ಟ್ ಆಕೆ ಸಲ್ಲಿಸಿದ್ದ ನಿರೀಕ್ಷಣಾ ಪರಿಹಾರ ಅರ್ಜಿಯನ್ನು ತಿರಸ್ಕರಿಸಿದೆ.

ಈ ಹಿಂದೆ ಮಾಜಿ ಪತಿ ಆದಿಲ್ ಖಾನ್ ದುರಾನಿ ತನ್ನ ಅಶ್ಲೀಲ ವೀಡಿಯೊಗಳನ್ನು ರಾಖಿ ಪ್ರಸಾರ ಮಾಡಿದ್ದರು ಎಂದು ಆರೋಪಿಸಿದ್ದರು.ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಮತ್ತು ಸಂಭಾವ್ಯ ಬಂಧನದಿಂದ ತಪ್ಪಿಸಿಕೊಳ್ಳುವ ಸಲುವಾಗಿ ರಾಖಿ ಸಾವಂತ್​, ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ತಿರಸ್ಕರಿಸಿದ ಕೋರ್ಟ್​, ನಾಲ್ಕು ವಾರಗಳಲ್ಲಿ ಶರಣಾಗುವಂತೆ ನಟಿಗೆ ತಿಳಿಸಿದೆ.

ಬಾಂಬೆ ಹೈಕೋರ್ಟ್ ಈ ಹಿಂದೆ ಆಕೆಯ ಮನವಿಯನ್ನು ವಜಾಗೊಳಿಸಿತ್ತು, ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ರಾಖಿಗೆ ಹೇಳಲಾಗಿತ್ತು. ಅದರಂತೆಯೇ ಮಾಡಿದ ಸಾವಂತ್​ಗೆ ಇದೀಗ ಭಾರೀ ಮುಖಭಂಗ ಎದುರಾಗಿದೆ.

ತನ್ನ ಖಾಸಗಿ, ಲೈಂಗಿಕ-ಅಶ್ಲೀಲ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಿದ್ದಾರೆ ಎಂದು ಆದಿಲ್ ಆರೋಪಿಸಿದ್ದರು. ರಾಖಿ ಮತ್ತು ಆದಿಲ್ 2022ರಲ್ಲಿ ವಿವಾಹವಾದರು ಎಂದು ಮೂಲಗಳು ತಿಳಿಸಿವೆ. ಆದರೆ, 2023ರ ಜನವರಿಯಲ್ಲಿ ನಟಿ ತಾನು ಮದುವೆಯಾದ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದರು.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ತಿಂಗಳುಗಳಲ್ಲಿ ದಂಪತಿಗಳು ವಿಚ್ಛೇದನ ಪಡೆಯುವ ಮೂಲಕ ದೂರವಾದರು. ತದನಂತರ ನ್ಯಾಯಾಲಯದಲ್ಲಿ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವಿವಾದ ಮಾಡಿಕೊಂಡರು.
ರಾಖಿ, ಆದಿಲ್ ಮೇಲೆ ಕೌಟುಂಬಿಕ ಹಿಂಸೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಆದಿಲ್ ನಿವಾಸದ ಮುಂದೆಯೂ ನಟಿ ಹೈಡ್ರಾಮಾ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!